ಮೊಬೈಲ್’ನಲ್ಲಿ ಮಾತನಾಡುತ್ತ ಟೆರೆಸ್’ನಿಂದ ಬಿದ್ದು ಅಕ್ಕಸಾಲಿಗ ಮೃತ್ಯು!
ವಿಟ್ಲ: ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನೋರ್ವ ಟೆರೇಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಕೊತ್ತಲಮಜಲು ನಿವಾಸಿ ದಿ. ವಿಶ್ವನಾಥ ಆಚಾರ್ಯರವರ ಪುತ್ರ ಪ್ರಸಾದ್ ಆಚಾರ್ಯ ಮೃತ ದುರ್ದೈವಿ.
ಇವರು ವಿಟ್ಲದ ಕೇಪು ಕುಕ್ಕೆಬೆಟ್ಟುವಿನಲ್ಲಿರುವ ಸಂಬಂಧಿಕರೋರ್ವರ ಮನೆಯಲ್ಲಿದ್ದು ಕೊಂಡು ಚಿನ್ನದ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ನಿನ್ನೆ ತಡರಾತ್ರಿ ಮನೆಯ ಟೆರೇಸ್ ಮೇಲೆ ಅವರು ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ವಿಟ್ಲದ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.
ದೇರಳಕಟ್ಟೆ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದ್ದು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.