ಸಾರ್ವಜನಿಕ ವಲಯದಲ್ಲಿ ತೀವೃ ಟೀಕೆ: ನೈಟ್ ಕರ್ಫ್ಯೂ ದಿಢೀರ್ ರದ್ದು!
ಬೆಂಗಳೂರು: ಬ್ರಿಟನ್ ನಲ್ಲಿ ರೂಪಾಂತರ ಹೊಂದಿದ ನೂತನ ಕೋವಿಡ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಇಂದಿನಿಂದ (ಡಿ. 24) 9 ದಿನಗಳ ಕಾಲ ರಾಜ್ಯಾದ್ಯಂತ ಹೇರಿದ್ದ ರಾತ್ರಿ ಕರ್ಫ್ಯೂವನ್ನು ಜಾರಿಯಾಗುವ ಮೊದಲೇ ದಿಢೀರ್ ಆಗಿ ರಾಜ್ಯ ಸರ್ಕಾರ ವಾಪಸ್ ಪಡೆದಿದೆ.
ನೈಟ್ ಕರ್ಫ್ಯೂ ಜಾರಿ ಮಾಡಿದ ಸರಕಾರ ಇಂದಿನಿಂದ ಜ.1 ರ ವರೆಗೆ ರಾತ್ರಿ 11 ರಿಂದ ಬೆಳಿಗ್ಗೆ 5 ರ ತನಕ ತುರ್ತು ಸೇವೆಗೆ ಹೊರತು ಪಡಿಸಿ ಇತರ ಸೇವೆ ಚಟುವಟಿಕೆಗಳಿಗೆ ನಿರ್ಬಂಧ ಹೇರಿತ್ತು.
ಸಾರ್ವಜನಿಕ ವಲಯದಲ್ಲಿ ತೀವೃ ಟೀಕೆಗೆ ಗುರಿಯಾದ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಆಗುವ ಮುನ್ನವೇ ರದ್ದಾಗಿದೆ. ಸರ್ಕಾರದ ನೈಟ್ ಕರ್ಫ್ಯೂ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.
ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಸರಕಾರ ಮನವಿ ಮಾಡಿಕೊಂಡಿದೆ.
Jai