ಉಡುಪಿ: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ “ಸುಶಾಸನ ದಿನ” ಆಚರಣೆ

ಉಡುಪಿ: ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜಿಲ್ಲೆಯ ಆರು ಮಂಡಲಗಳ ಹಿಂದುಳಿದ ವರ್ಗಗಳ ಮೋರ್ಚಾಗಳ ಸಹಯೋಗದೊಂದಿಗೆ ಭಾರತೀಯ ಜನತಾ ಪಾರ್ಟಿ- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರಾದ ನೆ.ಲ.ನರೇಂದ್ರಬಾಬು ರವರ ನಿರ್ದೇಶನದಂತೆ, ಶುಕ್ರವಾರ ಉಡುಪಿ ಶ್ರೀಕೃಷ್ಣ ಬಾಲ ನಿಕೇತನ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ನೀಡುವ ಮೂಲಕ ಆಶ್ರಮದಲ್ಲಿ “ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ” ಅವರ ಜನ್ಮದಿನದ “ಸುಶಾಸನ ದಿನ” ವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸುರೇಂದ್ರ ಪಣಿಯೂರು, ರಾಜ್ಯ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕರಾದ ಡಾಕ್ಟರ್ ಅಣ್ಣಯ್ಯ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಸುಧೀರ್ ಕೆ.ಎಸ್ ಮತ್ತು ಗಣೇಶ್ ಕುಮಾರ ಉದ್ಯಾವರ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್ ಕಡಿಯಾಳಿ, ಕಾರ್ಯದರ್ಶಿ ರಾಕೇಶ್ ಜೋಗಿ , ಕೋಶಾಧಿಕಾರಿ ಸತೀಶ್ ಪೂಜಾರಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಧರ ಅಮೀನ್, ಉಡುಪಿ ಮಂಡಲ ಹಿಂದುಳಿದ ವರ್ಗದ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ ಶೇರಿಗಾರ್, ಪ್ರಧಾನ ಕಾರ್ಯದರ್ಶಿ ಪ್ರಸಾದ ದೇವಾಡಿಗ, ಕೋಶಾಧಿಕಾರಿ ನಾಗರಾಜ ಕರ್ಕೇರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!