ಬೈಕ್‌ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ತಂಡದಿಂದ ಚೂರಿ ಇರಿತ

ಉಳ್ಳಾಲ: ಬೈಕ್‌ನಲ್ಲಿ ಬಂದ ತಂಡವೊಂದು ಯುವಕರಿಬ್ಬರಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ  ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಹಾಗೂ ಪಂಡಿತ್ ಹೌಸ್ ನಿವಾಸಿ ಪವನ್(27) ಚೂರಿ ಇರಿತಕ್ಕೊಳಗಾದ ಯುವಕರು.

ಈ ಯುವಕರಿಬ್ಬರು ಚರ್ಚೊಂದರಲ್ಲಿ ಕ್ಯಾಟರಿಂಗ್‌ನಲ್ಲಿ ಕೆಲಸದಲ್ಲಿದ್ದ ತಮ್ಮ ಸಹೋದರನನ್ನು ಕರೆ ತರಲು ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ ಅಪರಿಚಿತರು ಯುವಕರಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಇಬ್ಬರು ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಆ ಬಳಿಕ ಅಪರಿಚಿತ ವ್ಯಕ್ತಿಗಳು  ಇಬ್ಬರೂ ಯುವಕರಿಗೆ   ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ಗಾಯಗೊಂಡ ಇಬ್ಬರು ಯುವಕರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!