ಉಡುಪಿ: ಹೊಸ ವರ್ಷಾಚರಣೆಗೆ ನಾಲ್ಕು ದಿನಗಳ ಹೊಸ ನಿಯಮ ಜಾರಿ!

ಉಡುಪಿ: ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಜನರು ತಮ್ಮ ಮನೆಗಳಲ್ಲೇ ಸಂಭ್ರಮಾಚರಣೆ ಮಾಡಿಕೊಳ್ಳಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

ಸಾಮಾಜಿಕ ಜಾಲತಾಣ ವಿಡಿಯೋದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ ಅವರು, ಕೋವಿಡ್ ಕಾರಣದಿಂದ ಸರ್ಕಾರ ಹೊಸ ವರ್ಷಾಚರಣೆಗೆ ನಿಯಮಾವಳಿಗಳನ್ನು ಜಾರಿ ಮಾಡಿದೆ. ಈ ನಿಯಮಗಳು ಡಿ.30, 31 ಜ.1 ಮತ್ತು 2ರವರೆಗೆ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಕ್ಲಬ್, ಪಬ್, ಹೋಟೆಲ್ ಗಳು ವಿಶೇಷ ಕಾರ್ಯಕ್ರಮ ಆಯೋಜನೆ ಮಾಡುವಂತಿಲ್ಲ. ಸಾರ್ವಜನಿಕರನ್ನು ಸೇರಿಸುವಂತಿಲ್ಲ, ಆಫರ್ ನೀಡುವಂತಿಲ್ಲ. ಎಂದಿನಂತೆ ವ್ಯವಹಾರ ನಡೆಸಬಹುದು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವ ಹಾಗಿಲ್ಲ. ಮನೆಗಳಲ್ಲೇ ಹೊಸ ವರ್ಷ ಆಚರಿಸಿ, ಹಸಿರು ಪಟಾಕಿ ಮಾತ್ರ ಬಳಸಬಹುದು ಎಂದು ಜಿಲ್ಲಾಧಿಕಾರಿಗಳು ಸಂದೇಶದಲ್ಲಿ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!