ಬಿಜೆಪಿ ಫಲಾನುಭವಿಗಳ ಪ್ರಕೋಷ್ಟದ ರಾಜ್ಯ ಸದಸ್ಯರಾಗಿ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಆಯ್ಕೆ
ಉಡುಪಿ: ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಟದ ರಾಜ್ಯ ಸಮಿತಿಯ ಸದಸ್ಯರಾಗಿ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಇವರು ಈ ಹಿಂದೆ ಉಡುಪಿ ಜಿಲ್ಲಾ ವಿಧಾನ ಸಭಾ ಚುನಾವಣಾ ಪ್ರಣಾಳಿಕೆಯ ಸಂಚಾಲಕರಾಗಿ ಹಾಗೂ ಸಹಕಾರ ಪ್ರಕೋಷ್ಟದ ಜಿಲ್ಲಾ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಅವರನ್ನು ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಟದ ರಾಜ್ಯ ಸಮಿತಿಯ ಸದಸ್ಯರಾಗಿ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನೇಮಕ ಮಾಡಿದ್ದಾರೆ.