ಮಹಾರಾಷ್ತ್ರ : ಜನವರಿ 31 ರವರೆಗೆ ಲಾಕ್ ಡೌನ್ ವಿಸ್ತರಣೆ

ಮುಂಬೈ: ಮಹಾಮಾರಿ ಕೊರೊನಾ ವೈರಸ್ ದೇಶದ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಈ ಮಧ್ಯೆ ಇದೀಗ ಬ್ರಿಟನ್ ವೈರಸ್ ಕೂಡ ದೇಶಕ್ಕೆ ವಕ್ಕರಿಸಿಕೊಂಡಿದೆ. ಬ್ರಿಟನ್ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ಅನ್ನು 2021 ರ ಜನವರಿ 31ರವರೆಗೆ ವಿಸ್ತರಿಸಿದೆ.
ರಾಜ್ಯಕ್ಕೆ ಬ್ರಿಟನ್ ನಿಂದ ಬಂದವರು ತಮ್ಮ ಮೊಬೈಲ್ ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.

ಇದೀಗ ಅವರ ಪತ್ತೆಗೆ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಬ್ರಿಟನ್ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಿದೆ. ಈ ಹಿಂದೆ ಮಹಾರಾಷ್ಟ್ರ ಸರ್ಕಾರ ಜನವರಿ 5 ರವರೆಗೆ ನೈಟ್ ಕರ್ಫ್ಯೂ ಜಾರಿಗೆ ಗೊಳಿಸಿತ್ತು ಇದೀಗ ರಾಜ್ಯದಲ್ಲಿ ಬ್ರಿಟನ್ ವೈರಸ್ ಕಾಣಿಸಿಕೊಂಡ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜನವರಿ 31 ರವರೆಗೆ ಲಾಕ್ ಡೌನ್ ವಿಸ್ತರಿಸಿದೆ

ಮಹರಾಷ್ಟ್ರಕ್ಕೆ ಯುಕೆಯಿಂದ ಬಂದಂತಹ 15 ಮಂದಿಯಲ್ಲಿ ಬ್ರಿಟನ್ ವೈರಸ್ ಪತ್ತೆಯಾಗಿತ್ತು. ಇನ್ನೂ ಕೆಲವರು ನಾಪತ್ತೆಯಾಗಿದ್ದು, ಇವರೆಲ್ಲರ ಪತ್ತೆ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

Leave a Reply

Your email address will not be published. Required fields are marked *

error: Content is protected !!