ಜ.2ರಂದು ಅನಿವಾಸಿ ಕನ್ನಡಪರ ಸಂಘಟನೆಗಳಿಂದ ‘ಎನ್ಆರೈ ಅಪೀಲ್ ಡೇ’

ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಸೇರಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಎನ್ಆರೈ ಅಪೀಲ್ ಡೇ ಎಂಬ ಅಭಿಯಾನವನ್ನು  ಹ್ಯಾಷ್’ಟ್ಯಾಗ್ ನೊಂದಿಗೆ ಜನವರಿ 2ರಂದು ಆಚರಿಸಲು ಮುಂದಾಗಿದೆ.

ಅನಿವಾಸಿ ಕನ್ನಡಿಗರಿಗಾಗಿಯೇ ಕರ್ನಾಟಕ ಸರಕಾರದಲ್ಲಿ ಅನಿವಾಸಿ ಭಾರತೀಯ ಸಮಿತಿ ಇದೆ(ಕೆಎನ್ಆರೈ ಪೋರಂ), ಅದರ ಅಧ್ಯಕ್ಷರು ಸ್ವತಃ ಮುಖ್ಯಮಂತ್ರಿಗಳು, ಆದರೆ ಮುಖ್ಯಮಂತ್ರಿಗಳಿಗೆ ಸರ್ಕಾರದ ಇತರ ಗಂಭೀರ  ಜವಾಬ್ದಾರಿಗಳಿರುವ ಕಾರಣ ಕೆಎನ್ಆರೈ ಸಮಿತಿಯಲ್ಲಿ ಉಪಾಧ್ಯಕ್ಷರಿಗೇ ಹೆಚ್ಚಿನ ಜವಾಬ್ದಾರಿ ಇರುತ್ತದೆ.

ಆದರೆ ಕಳೆದ ಮೂರು ವರ್ಷಗಳ ಹಿಂದೆ ತೆರವುಗೊಂಡ ಉಪಾಧ್ಯಕ್ಷ ಸ್ಥಾನಕ್ಕೆ ಹೊಸದಾಗಿ ಯಾರನ್ನು ನೇಮಕವೇ ಮಾಡಿಲ್ಲ, ಹಲವಾರು ಕನ್ನಡಪರ ಸಂಘಟನೆಗಳು ಈ ಕುರಿತು ಸರ್ಕಾರದ ಗಮನ ಸೆಳೆದಿದ್ದರೂ ಯಾರು ಸ್ಪಂದಿಸುವ ಗೋಜಿಗೆ ಹೋಗಿರಲಿಲ್ಲ, ಇದೀಗ  ತೆರವಾದ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ  ಬೇರೆಯವರನ್ನು ನೇಮಕ ಮಾಡುವ ಕುರಿತು ಬೇಡಿಕೆಯನ್ನು ಕರ್ನಾಟಕ ಸರಕಾರಕ್ಕೆ ತಲುಪಿಸುವ ಸಲುವಾಗಿ  ಈ ವಿಭಿನ್ನ ಅಭಿಯಾನ ಆರಂಭ ಗೊಂಡಿದೆ.

ಈ ಅಭಿಯಾನದ ಮೂಲಕ ಟ್ವಿಟರ್ ಮತ್ತು ಇಮೇಲ್ ಮೂಲಕ ಕರ್ನಾಟಕ ಸರಕಾರಕ್ಕೆ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಲು ತೀರ್ಮಾನಿಸಲಾಗಿದೆ      ಅಂತರರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಕರೆಕೊಟ್ಟಿದ್ದು ಅನಿವಾಸಿಗಳಿಗಾಗಿ ಒಂದು ದಿನ’ ಎಂದು ದೇಶ ವಿದೇಶಗಳಲ್ಲಿ ಇರುವ ಎಲ್ಲಾ ಕನ್ನಡಿಗರಿಗೂ ಅಭಿಯಾನದಲ್ಲಿ ಭಾಗವಹಿಸಲು ವಿನಂತಿಸಲಾಗಿದೆ. ಈ ಅಭಿಯಾನಕ್ಕೆ ಈಗಾಗಲೇ ಅಮೆರಿಕ, ಯುಎಇ, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜರ್ಲ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಹಾಂಕಾಂಗ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದರ್ಲ್ಯಾಂಡ್, ಸೌತ್ ಕೊರಿಯಾ  ಇನ್ನಿತರ ದೇಶದ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಈಗಾಗಲೇ ಬೆಂಬಲ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!