ಉಡುಪಿ: ಸರಣಿ ಅಪಘಾತ – ಸ್ಕೂಟರ್ ಸವಾರ ಮೃತ್ಯು
ಉಡುಪಿ: ಮಲ್ಪೆ ವಡಬಾಂಡೇಶ್ವರ ತೊಟ್ಟಂ ರಸ್ತೆಯ ತಿರುವಿನಲ್ಲಿ ನಡೆದ ಸರಣಿ ಅಪಘಾತದಲ್ಲಿ ದ್ವಿಚಕ್ರ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.
ಮೃತರನ್ನು ಹೂಡೆ ನಿವಾಸಿ ಇಸಾಕ್ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ನಸುಕಿನ ಜಾವ 4.15 ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಮೀನು ಸಾಗಾಟದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದರು. ಗಂಭೀರ ಗಾಯಗೊಂಡ ದ್ವಿಚಕ್ರ ಸವಾರನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತ ನಡೆಸಿ ಮೀನು ಸಾಗಾಟದ ಲಾರಿ ಚಾಲಕ ಪರಾರಿಯಾಗಿದ್ದು, ಈ ಬಗ್ಗೆ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.