ಕಡಿಯಾಳಿ ಆಸರೆ ಚಾರಿಟೇಬಲ್ ಟ್ರಸ್ಟ್: 4 ಮನೆಗಳಿಗೆ ವಿದ್ಯುತ್ ಸಂಪರ್ಕ

ಉಡುಪಿ( ಉಡುಪಿ ಟೈಮ್ಸ್ ವರದಿ);: ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಇದರ ಮಾರ್ಗದರ್ಶನದಲ್ಲಿ,ಆಸರೆ ಚಾರಿಟೇಬಲ್ ಟ್ರಸ್ಟ್ ಕಡಿಯಾಳಿ ವತಿಯಿಂದ ಉಡುಪಿ ನಗರಸಭಾ ವ್ಯಾಪ್ತಿಯ ಕಸ್ತೂರ್ಬಾ ನಗರ ವಾರ್ಡಿನ ಆರ್ಥಿಕವಾಹಿ ಹಿಂದುಳಿದ ಅತ್ಯಂತ ಬಡ ಕುಟುಂಬದ 4 ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಯಿತು.

ಈ ಕಾರ್ಯಕ್ರಮವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಉಡುಪಿ ನಗರದ ದೀನ ದಲಿತರ, ಬಡವರ ಮತ್ತು ಹಲವಾರು ವರ್ಷಗಳಿಂದ ವಿದ್ಯುತ್ ಇಲ್ಲದ ಮನೆಗಳನ್ನು ಗುರುತಿಸಿ ಉಚಿತ ವಿದ್ಯುತ್ ಸಂಪರ್ಕ ನೀಡುವ ಮೂಲಕ ಆಸರೆ ಚಾರಿಟೇಬಲ್ ಟ್ರಸ್ಟ್ ಮನೆ ಬೆಳಗುವ ಕೆಲಸ ಮಾಡುತ್ತಿದ್ದು, ರಾಜ್ಯಕ್ಕೆ ಮಾದರಿಯಾದ ಕೆಲಸ ಮಾಡುತ್ತಿದೆ ಎಂದರು.
ಈ ವೇಳೆ, ಶಾಸಕ ಕೆ .ರಘುಪತಿ ಭಟ್ ಅವರು, ಮಾತನಾಡಿ 2022 ರ ಒಳಗೆ ಉಡುಪಿ ನಗರ ನೂರು ಶೇಕಡಾ ಮನೆಗೆ ವಿದ್ಯುತ್ ಸಂಪರ್ಕ ಹೊಂದಿದ ನಗರವಾಗಿ ಮಾಡುವ ಸಂಕಲ್ಪ ತೊಟ್ಟಿದ್ದೇವೆ. ಆ ಮೂಲಕ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ “ಘರ್ ಘರ್ ಬಿಜಿಲಿ” ಕಾರ್ಯಕ್ರಮ ಯಶಸ್ವಿಗೊಳಿಸುವ ಯೋಜನೆ ಇದೆ ಎಂದರು. ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ವಸಂತ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು..

ಈ ಸಂದರ್ಭ ಸುಶೀಲ ರಮಾನಂದ, ಪದ್ಮ , ಮಹಾಲಿಂಗ ಯಾನೆ.. ಮಾಂಗ್ರ ಅವರ ಮನೆಗಳಿಗೆ ಹರಿಪ್ರಸಾದ್ ರಾವ್(ಚಿರಾಗ್ ಎಲೆಕ್ಟ್ರಿಕಲ್ಸ್ ಕಡಿಯಾಳಿ) ಅವರಿಂದ ವಿದ್ಯುತೀಕರಣ ವ್ಯವಸ್ಥೆ, ಸುಂದರನಾಯ್ಕ ಮನೆಗೆ ಸೆಲ್ಕೋ ಸೋಲಾರ್ ಉಡುಪಿ ವತಿಯಿಂದ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಯಿತು.


ಈ ಸಂದರ್ಭ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಆಸರೆ ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯ ರಾಜು, ಕೋಶಾಧಿಕಾರಿ ಸತೀಶ್ ಕುಲಾಲ್, ಬಬ್ಬು ಸ್ವಾಮಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್, ಗುರಿಕಾರ ಶ್ರೀನಿವಾಸ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!