ನೆಲ್ಯಾಡಿ: ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಶರಣಾದ ಯುವತಿ
ಮಂಗಳೂರು: ಬೆಂಕಿ ಹಚ್ಚಿಕೊಂಡು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ. ನವ್ಯಾ ಜೋಸೆಫ್ (22) ಆತ್ಮಹತ್ಯೆ ಗೆ ಶರಣಾದ ಯುವತಿ. ಇವರು ನಿನ್ನೆ ಮನೆಯಲ್ಲಿ ರಾತ್ರಿ 10.30ಕ್ಕೆ ಊಟ ಮುಗಿಸಿ ತನ್ನ ಕೊನೆಗೆ ತೆರಳಿದ್ದರು. ಆ ಬಳಿಕ ಇಂದು ಮುಂಜಾನೆ ಕೋಣೆಯಿಂದ ಹೊರಗೆ ಬಾರದಿರುವುದನ್ನು ಗಮನಿಸಿ, ಮನೆಯವರು ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. |