ಇನ್ನು ಮುಂದೆ ಸಾಂಪ್ರದಾಯಿಕ ಉಡುಪು ಧರಿಸಿದವರಿಗೆ ಮಾತ್ರ ದೈವಸ್ಥಾನ ಪ್ರವೇಶ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದವರಿಗೆ ಮಾತ್ರ ಪ್ರವೇಶ ಸಿಗಲಿದೆ. ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಉಳ್ಳಾಲದ ಎಲ್ಲಾ ದೈವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರಸಂಹಿತೆಯನ್ನು ನಿಗದಿಪಡಿಸಿದೆ.
ಉಳ್ಳಾಲದಲ್ಲಿರುವ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ಈ ಕುರಿತು ಬ್ಯಾನರ್ ಗಳನ್ನು ಅಳವಡಿಸಿದ್ದು, ಈ ಬ್ಯಾನರ್ ಗಳು ಸಾಂಪ್ರದಾಯಿಕ ಉಡುಗೆ ಧರಿಸಿದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ ಎನ್ನುವುದನ್ನು ಸೂಚಿಸುತ್ತದೆ.