ಮ್ಯುಟೇಷನ್ ವಿಲೇವಾರಿಯಲ್ಲಿ ಮೊದಲ ಸ್ಥಾನ – ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಭಿನಂದನೆ

ಉಡುಪಿ, ಜನವರಿ 05: ಕಾರ್ಕಳ ತಾಲೂಕು ಭೂಮಿ ಶಾಖೆಯು ಡಿಸೆಂಬರ್ 2020 ತಿಂಗಳಲ್ಲಿ ಮ್ಯುಟೇಷನ್ ವಿಲೇವಾರಿಯಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದ್ದು, ಇತ್ತೀಚೆಗೆ ಕಾರ್ಕಳ ತಾಲೂಕು ಕಛೇರಿಗೆ ಭೇಟಿ ನೀಡಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ಇವರು ಭೂಮಿ ಶಾಖೆಯವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಕುಂದಾಪುರ ಸಹಾಯಕ ಕಮಿಷನರ್ ರಾಜು ಹಾಗೂ ಕಾರ್ಕಳ ತಹಶೀಲ್ದಾರ್ ಪುರಂದರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!