ಉಡುಪಿ: ಸೆ.3 ರಿಂದ 5 ವರೆಗೆ ವಾರಾಂತ್ಯ ಕರ್ಫ್ಯೂ- ಏನಿದೆ.. ? ಏನಿರಲ್ಲ..?

ಉಡುಪಿ(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಹಿನ್ನೆಲೆ ವಾರಾಂತ್ಯ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಬಗ್ಗೆ ಇಂದ್ದಂತಹ ಕುತೂಹಲ ಕ್ಕೆ ಇಂದು ತೆರೆ ಬಿದ್ದಿದೆ. ಜಿಲ್ಲಾಧಿಕಾರಿ ಎಂ. ಕೂರ್ಮ ರಾವ್ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂನ ಅವಧಿಯಲ್ಲಿ ಯಾವ ಎಲ್ಲಾ ಸೇವೆಗಳು ಇರಲಿದೆ ಹಾಗೂ ಯಾವ ಯಾವ ಸೇವೆಗಳು ಇರುವುದಿಲ್ಲ ಎಂಬ ಮಾಹಿತಿ ನೀಡಿದ್ದಾರೆ. ಈ ಮೂಲಕ ಜಿಲ್ಲೆಯ ಜನತೆಯ ಗೊಂದಲಗಳನ್ನು ಪರಿಹರಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು-ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು/ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳಿಗೆ ಅವಕಾಶ ನೀಡಲಾಗಿದೆ.

ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರ ಸರಕು ಸಾಗಾಟದ ವಾಹನಗಳು, ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಕಂಪೆನಿಗಳು ಹಾಗೂ ಹೋಮ್ ಡಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿ ನೀಡಲಾಗಿದೆ. ಇದರೊಂದಿಗೆ ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಲಾಗಿದ್ದು, ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಇನ್ನು ಶುಕ್ರವಾರ ರಾತ್ರಿ 9 ಗಂಟೆಯಿಂದ ಪ್ರತಿ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿ ಮಾಡಲಾಗಿರುವ ವಾರಾಂತ್ಯ ಕರ್ಫ್ಯೂ ನ ಅವಧಿಯಲ್ಲಿ ಮದುವೆ ಹೊರತು ಪಡಿಸಿ ಇತರ ಯಾವುದೇ ಸಭೆ ಸಮಾರಂಭ ಗಳಿಗೆ ಅನುಮತಿ ನೀಡಿಲ್ಲ. ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ,ಬೀದಿಬದಿ ವ್ಯಾಪಾರಸ್ಥರಿಗೆ, ಸಾರ್ವಜನಿಕ ವಿತರಣಾ ವ್ಯವಸ್ಥೆ (PDS)ಯ ಅಂಗಡಿಗಳಿಗೆ ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸಲ್ ಕೊಂಡುಹೋಗಲು ಮಾತ್ರ ಅನುಮತಿ ನೀಡಲಾಗಿದೆ. ಡೈರಿ ಮತ್ತು ಹಾಲಿನ ಭೂತ್ ಗಳಿಗೆ ಬೆಳಿಗ್ಗೆ 5 ರಿಂದ ರಾತ್ರಿ 8.00 ಗಂಟೆಯವರೆಗೆ ಕಾರ್ಯಚರಿಸಲು ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್ ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳಿಗೆ ಮಾತ್ರ ಅನುಮತಿಸಲಾಗಿದೆ.

ರೋಗಿಗಳು ಮತ್ತು ಅವರ ಪರಿಚಾರಕರು/ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿಸಿದೆ. ಇದರೊಂದಿಗೆ ಕೋವಿಡ್ ನಿಯಮಗಳನ್ನು ಅನುಸರಿಸಿ ಕೊಂಡು ಮದುವೆ ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ನಿಗದಿಪಡಿಸಿದ ಷರತ್ತಿಗೊಳ ಪಟ್ಟು, ಸಭಾಂಗಣದ ಸಾಮರ್ಥ್ಯದ 50 ಶೇ.ದಷ್ಟು ಮತ್ತು ಗರಿಷ್ಠ 400 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ. ಹಾಗೂ ಶವಸಂಸ್ಕಾರ ಅಂತ್ಯಕ್ರಿಯೆಗಳನ್ನು ಗರಿಷ್ಠ 20 ಜನರೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ನಡೆಸಲು ಅನುಮತಿ ನೀಡಲಾಗಿದೆ. ವಾರಾಂತ್ಯದ ಕರ್ಪೂ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಬಸ್, ರೈಲು ಮತ್ತು ವಿಮಾನ ಪ್ರಯಾಣಗಳಿಗೆ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆ/ಟಿಕೆಟ್ ಗಳನ್ನು ಸಲ್ಲಿಸುವುದು ಕಡ್ಡಾಯ ವಾಗಿದೆ.

ಇನ್ನು ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು ಅಗತ್ಯ ಸೇವೆಗಳು ಮತ್ತು ಕೋವಿಡ್ ಕಂಟೈನ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿ ಸುತ್ತವೆ ಮತ್ತು ಇಂತಹ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. 24×7 ಸಮಯಾವಧಿಯಲ್ಲಿ ಕಾರ್ಯಚರಿಸುವ ತುರ್ತು ಮತ್ತು ಆಗತ್ಯ, ಸೇವೆಗಳನ್ನು ಪೂರೈಸುವ ಎಲ್ಲಾ ಕೈಗಾರಿಕೆಗಳು, ಕಂಪೆನಿಗಳು ಸಂಸ್ಥೆಗಳು ಕಾರ್ಯಾನಿರ್ವಹಿಸಲು ಅನುಮತಿ ನೀಡಲಾಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿ / ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡರು. ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!