ಭಾರತೀಯ ರೆಡ್ ಕ್ರಾಸ್: ಕಡೆಕಾರು,ಕುತ್ಪಾಡಿ ಪರಿಸರದ 40 ಫಲಾನುಭವಿಗಳಿಗೆ ಕಿಟ್ ವಿತರಣೆ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ದಿಂದ ಆಯ್ದ ನೆರೆ ಸಂತ್ರಸ್ತ ಫಲಾನುಭವಿಗಳಿಗೆ ಪರಿಹಾರ ಸಾಮಾಗ್ರಿಗಳ ಕಿಟ್, ಮಾಸ್ಕ್, ಮತ್ತು ಸೋಪುಗಳ ವಿತರಣೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕವು ಶನಿವಾರ ನಿಡಂಬೂರು ಯುವಕ ಮಂಡಲದ ಸಹಯೋಗದೊಂದಿಗೆ ಗುರುತಿಸಲಾದ ಆಯ್ದ ನೆರೆ ಸಂತ್ರಸ್ತ ಫಲಾನುಭವಿಗಳಿಗೆ ಪರಿಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.

ಈ ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಉದ್ಘಾಟಿಸಿ, ರೆಡ್ ಕ್ರಾಸ್ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನವಿಯ ಸೇವೆಯನ್ನು ಮಾಡುವ ಸಂಸ್ಥೆಯಾಗಿದ್ದು, ಇದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ, ನೊಂದವರ, ದೀನದಲಿತರ ಸೇವೆಗೆ ತಮ್ಮನ್ನು ಮುಡಿಪಾಗಿಟ್ಟು ಸೇವೆಯನ್ನು ಮಾಡುತ್ತ ಬಂದಿರುತ್ತದೆ.

ಮುಂದಿನ ದಿನಗಳಲ್ಲಿ ಸದ್ರಿ ಫಲಾನುಭವಿಗಳಿಗೆ ಇನ್ನೂ ಹೆಚ್ಚಿನ ಸೇವೆ ನೀಡುವುದಾಗಿ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ ಜಿ. ಗೌರವ ಕಾರ್ಯದರ್ಶಿ ಶ್ರೀ ಕೆ. ಜಯರಾಮ್ ಆಚಾರ್ಯ ಸಾಲಿಗ್ರಾಮರವರು ಉಪಸ್ಥಿತರಿದ್ದು ರೆಡ್ ಕ್ರಾಸ್ ಸಂಸ್ಥೆಯು ಮಾಡುತ್ತಿರುವ ಸೇವೆಗಳ ಬಗ್ಗೆ ಸವಿವರವಾಗಿ ಮಾಹಿತಿಯನ್ನು ನೀಡಿದರು ಹಾಗೂ ರೆಡ್ ಕ್ರಾಸ್ ಆಡಳಿತ ಮಂಡಳಿ ಸದಸ್ಯರು ಹಾಗೂ ಡಿಡಿಆರ್‌ಸಿ ಸದಸ್ಯ ಕಾರ್ಯದರ್ಶಿ ಕೆ. ಸನ್ಮತ್ ಹೆಗ್ಡೆಯವರು ಡಿಡಿಆರ್‌ಸಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕಡೆಕಾರು ಮತ್ತು ಕುತ್ಪಾಡಿ ಪರಿಸರದ 40 ಫಲಾನುಭವಿಗಳಿಗೆ ಕಿಚನ್ ಸೆಟ್ಸ್, ಹೊದಿಕೆ, ಫೇಸ್ ಮಾಸ್ಕ್ ಮತ್ತು ಸೋಪುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಯುವಕ ಮಂಡಲದ ಅಧ್ಯಕ್ಷರಾದ ದಿನೇಶ್ ಕುಮಾರ್, ಗೌರವ ಅಧ್ಯಕ್ಷರಾದ ಶೇಖರ್ ಅಂಚನ್ ಹಾಗೂ ನಿಡಂಬೂರು ಯುವಕ ಮಂಡಲ ಟ್ರಸ್ಟ್ ನ ಖ್ಯಾತ ನ್ಯಾಯವಾದಿ ಶ್ರೀನಿವಾಸ್ ಹೆಗ್ಡೆ ಯವರು ಮತ್ತು ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!