ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತನ್ನಿ: ಜನಾರ್ಧನ್ ಪೂಜಾರಿ

ಬಂಟ್ವಾಳ: ನಾಯಕರು ಮತ್ತು ಕಾರ್ಯಕರ್ತರು ಸೇರಲು ಮತ್ತು ಪಕ್ಷವನ್ನು ಸಂಘಟಿಸಲು ಒತ್ತು ನೀಡುವುದು ಅವಶ್ಯಕವಾಗಿದ್ದು, ಕಾರ್ಯಕರ್ತರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ್ ಪೂಜಾರಿ ಹೇಳಿದ್ದಾರೆ. 

ಕೆಪಿಸಿಸಿ ಕಾರ್ಯನಿರ್ವಾಹಕ ಅಧ್ಯಕ್ಷ ಸಲೀಂ ಅಹ್ಮದ್ ಅವರು ಜನಾರ್ದನ್ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿದ  ಸಂದರ್ಬ ಪಕ್ಷವನ್ನು ಬಲಗೊಳಿಸುವ ಬಗ್ಗೆ ಮಾತನಾಡಿದ ಅವರು, ನಾವು ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಮೂಲಕ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

 ಇದೇ ವೇಳೆ ಕೇಂದ್ರ ಮತ್ತು ರಾಜ್ಯದಲ್ಲಿನ ಸರ್ಕಾರಗಳ ವೈಫಲ್ಯಗಳ ವಿರುದ್ಧ ಅಭಿಯಾನ ನಡೆಸಲು ಮೈಸೂರು ವಿಭಾಗ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವು ಬಂಟ್ವಾಳದಲ್ಲಿ ನಡೆಸಿದ ಸಮ್ಮೇಳನವನ್ನು ಸ್ವಾಗತಿಸಿದ ಅವರು ಸಮ್ಮೇಳನಕ್ಕೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!