ಕರಾವಳಿಯಲ್ಲಿ ಜ.10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ
ಉಡುಪಿ: ಕರಾವಳಿಯಲ್ಲಿ ಇನ್ನೂ ಮೂರು ದಿನಗಳಕಾಲ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ, ಹಲವೆಡೆ ಜನರು ಪರದಾಡುವಂತಹ ಸ್ಥಿತಿ ನಿರ್ಮಾಣ ಗೊಂಡಿದ್ದು ಕರಾವಳಿ ಜಿಲ್ಲೆಗಳಲ್ಲಿ ಜ.10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.