ಜ.8-9ರಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ ಸತೀಶ್ ಮರಾಠೆ ಉಡುಪಿ ಪ್ರವಾಸ

ಉಡುಪಿ: ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ ಸತೀಶ್ ಮರಾಠೆಯವರ ಉಡುಪಿ ಪ್ರವಾಸ ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕರಾದ ಸತೀಶ್ ಮರಾಠೆಯವರು ಜನವರಿ 8 ಮತ್ತು 9 ರಂದು ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಜ.8ರ ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಆಗಮಿಸಲಿದ್ದು, 11.30ಕ್ಕೆ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಹಾಗೂ ಪರ್ಯಾಯ ಶ್ರೀಪಾದರ ಭೇಟಿ, 3.15 ಭಾರತ್ ಟೂರಿಸಮ್ ಕೋ-ಓಪರೇಟಿವ್ ಲಿ., ಆಡಳಿತ ಮಂಡಳಿಯವರೊಂದಿಗೆ ಸಂವಾದ ಕಾರ್ಯಕ್ರಮ, ಸಂಜೆ 4 ಗಂಟೆಗೆ ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಉಡುಪಿ ಡಯಾನ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 6ಕ್ಕೆ ಶ್ರೀ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಜ.9ರ ಬೆಳಿಗ್ಗೆ 10.30ಕ್ಕೆ ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಆಡಳಿತ ಕಛೇರಿಯಲ್ಲಿ ಬ್ಯಾಂಕಿನ ನಿರ್ದೇಶಕರು ಹಾಗೂ ಅರ್ಬನ್ ಕೋ-ಓಪರೇಟಿವ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರೊಂದಿಗೆ ಸಂವಾದ ಕಾರ್ಯಕ್ರಮ, ಮಧ್ಯಾಹ್ನ 3.೦೦ ಗಂಟೆಗೆ ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ನವೀಕೃತ ಉಚ್ಚಿಲ ಶಾಖೆಯ ಹಾಗೂ ನೂತನ ಎಟಿಮ್ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, 5 ಗಂಟೆಗೆ ದ.ಕ ಹಾಲು ಉತ್ಪಾದಕರ ಒಕ್ಕೂಟದ ಉಪ್ಪೂರು ಘಟಕಕ್ಕೆ ಭೇಟಿ ನೀಡಲಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!