ಉಡುಪಿ: ಮತ್ತೆ 45 ಪಾಸಿಟಿವ್, ರಾಜ್ಯದಲ್ಲಿ ಹೊಸದಾಗಿ 308 ಪ್ರಕರಣ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು, ಸೋಮವಾರ ಮತ್ತೆ ಬರೋಬ್ಬರಿ 308 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಕೊರೋನಾ ವೈರಸ್ ನಿಂದ ಮೂವರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ 18, ಕಲಬುರಗಿಯಲ್ಲಿ 99, ಯಾದಗಿರಿಯಲ್ಲಿ 66, ಬೀದರ್ ನಲ್ಲಿ 48 ಹಾಗೂ ಉಡುಪಿಯಲ್ಲಿ 45 ಸೇರಿದಂತೆ ರಾಜ್ಯದಲ್ಲಿ ಒಟ್ಟು 308 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.
5760 ಸೋಂಕಿತರ ಪೈಕಿ 2519 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಟಾರ್ ಆಗಿದ್ದಾರೆ. 3175 ಮಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 14 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.