ಜ.12: ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ ಕುರಿತು ಬಹಿರಂಗ ವಿಚಾರಣೆ

ಉಡುಪಿ, ಜನವರಿ 7: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕೆ. ಜಯಪ್ರಕಾಶ್ ಹೆಗ್ಡೆ, ಇವರ ಅಧ್ಯಕ್ಷತೆಯಲ್ಲಿ ವಿವಿಧ ಜಾತಿ/ಜನಾಂಗಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಸೇರಿಸಲು, ಪ್ರವರ್ಗ ಬದಲಾವಣೆಗೆ, ಪರ್ಯಾಯ ಪದ ಸೇರ್ಪಡೆಗೆ ಮತ್ತು ಕಾಗುಣಿತ ದೋಷ ತಿದ್ದುಪಡಿ ಹಾಗೂ ಇತರೆ ವಿಷಯಗಳಿಗೆ ಸಂಬoಧಿಸಿದoತೆ, ಆಯೋಗದಲ್ಲಿ ಸ್ವೀಕೃತಗೊಂಡಿರುವ ಮನವಿಗಳ ಬಹಿರಂಗ ವಿಚಾರಣೆಯನ್ನು ಜನವರಿ 12 ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ, ಉಡುಪಿ ಇಲ್ಲಿ ಬಹಿರಂಗ ವಿಚಾರಣೆಯನ್ನು
ಏರ್ಪಡಿಸಿದೆ.

ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಸೇರಿಸಲು, ಪ್ರವರ್ಗ ಬದಲವಣೆಗೆ, ಪರ್ಯಾಯ ಪದ ಸೇರ್ಪಡೆಗೆ ಮತ್ತು ಕಾಗುಣಿತ ದೋಷ ತಿದ್ದುಪಡಿ ಮತ್ತು ಇತರೆ ವಿಷಯಕ್ಕೆ ಸಂಬoಧಿಸಿದoತೆ, ಹೊಸದಾಗಿ ಮನವಿ ಸಲ್ಲಿಸಲು ಇಚ್ಚಿಸುವ ಸಾರ್ವಜನಿಕರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಬಹುದಾಗಿದೆ. ಮನವಿಗಳನ್ನು ಬಹಿರಂಗ
ವಿಚಾರಣೆಯು ಮುಗಿದ ನಂತರ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸ್ವೀಕರಿಸಲಾಗುವುದೆಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!