ಕೋವಿಡ್ ಮಾರ್ಗ ಸೂಚಿ ಪಾಲಿಸದ ಹಾಲ್ ಗೆ ಐದು ಸಾವಿರ ರೂ. ದಂಡ ವಿಧಿಸಿದ ಮಹಾನಗರ ಪಾಲಿಕೆ!

ಮಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮೊದಲಾದ ಕೋವಿಡ್ ಮಾರ್ಗ ಸೂಚಿಗಳನ್ನು ಜಾರಿ ಮಾಡಲಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮಾರ್ಗ ಸೂಚಿಯನ್ನು ಪಾಲಿಸದವರಿಗೆ ದಂಡ ವಿಧಿಸಿರುವ ಘಟನೆಯೊಂದು ನಡೆದಿದೆ. 

ನಿನ್ನೆ ಮಂಗಳೂರಿನ ಕಂಕನಾಡಿಯಲ್ಲಿರುವ ವೆಲ್ಲೆನ್ಸಿಯಾ ಚರ್ಚ್ ಹಾಲ್‌ನಲ್ಲಿ ಸಮಾರಂಭ ವೊಂದನ್ನು ಆಯೋಜಿಸಲಾಗಿತ್ತು. ಆದರೆ ಈ ಸಮಾರಂಭದಲ್ಲಿ ಕೋವಿಡ್ ಮಾರ್ಗ ಸೂಚಿಯನ್ನು ಪಾಲಿಸದ ಕಾರಣ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಪಾಲಿಸದಿರುವ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆ 5,000 ರೂ. ದಂಡ ವಿಧಿಸಿದೆ. ಸದ್ಯ ದಂಡ ವಿಧಿಸಿದ ರಸೀದಿ ವೈರಲ್ ಆಗಿದೆ.

ಕೋವಿಡ್ ನಿಯಂತ್ರಿಸುವ ಸಲುವಾಗಿ ಈ ರೀತಿ ಕಟ್ಟುನಿಟ್ಟಿ ಕ್ರಮ ಕೈಗೊಳ್ಳುವುದು ಸ್ವಾಗತಾರ್ಹ, ಆದರೆ ಈ ರೀತಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೂಗೊಳ್ಳುವ ಕಾರ್ಯವು ಎಲ್ಲೆಡೆ, ಎಲ್ಲರಿಗೂ ಏಕರೂಪದಲ್ಲಿ ಜಾರಿ ಆಗಬೇಕು ಎಂಬ  ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

1 thought on “ಕೋವಿಡ್ ಮಾರ್ಗ ಸೂಚಿ ಪಾಲಿಸದ ಹಾಲ್ ಗೆ ಐದು ಸಾವಿರ ರೂ. ದಂಡ ವಿಧಿಸಿದ ಮಹಾನಗರ ಪಾಲಿಕೆ!

  1. I was attended wedding at Moodubidri on yesterday which no one maintained the covid 19 rules and regulations that not a single person used mask on their face except me and there was no distance of people in the hall even there was huge line to the meal counter.

Leave a Reply

Your email address will not be published. Required fields are marked *

error: Content is protected !!