ಎರಡು ಹದ್ದುಗಳ ಮೃತದೇಹ ಪತ್ತೆ, ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಎಲ್ಲೆಡೆ ಹಕ್ಕಿ ಜ್ವರದ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಬೆಳ್ತಂಗಡಿಯ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ಎಂಬಲ್ಲಿ ಇಂದು ಎರಡು ಹದ್ದುಗಳ ಮೃತದೇಹ ಪತ್ತೆಯಾಗಿದೆ. ಮೊದಲೇ ಹಕ್ಕಿ ಜ್ವರದ ವದಂತಿಗಳಿಂದ ಗಾಬರಿಗೊಂಡಿರುವ  ಸ್ಥಳೀಯರಲ್ಲಿ ಈ ಘಟನೆ ಮತ್ತಷ್ಟು ಆತಂಕಕ್ಕೀಡಾಗುವಂತೆ ಮಾಡಿದೆ. 

ಇಂದು ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹದ್ದುಗಳ ಶವ ಪತ್ತೆಯಾಗಿದೆ. ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಹಕ್ಕಿಜ್ವರದ ಆತಂಕ ಸೃಷ್ಟಿಯಾಗಿರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹದ್ದುಗಳ ಮೃತದೇಹದ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ವರದಿ ಬಂದ ಬಳಿಕವೇ ಹದ್ದುಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಇನ್ನು ಮುಂಜಾಗೃತಾ ಕ್ರಮವಾಗಿ ಸುತ್ತಮುತ್ತಲಿನ ಪರಿಸರದಲ್ಲಿ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!