ಚುನಾವಣೆಯಲ್ಲಿ ಗೆದ್ದವರು ಸೋತವರು ಎಲ್ಲರೂ ಪಕ್ಷಕ್ಕೆ ನಾಯಕರೇ: ಪ್ರಮೋದ್
ಉಡುಪಿ: ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಹಾಗೂ ಸ್ಪರ್ಧಿಸಿದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆದಿತ್ಯವಾರ ಜರುಗಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ರವರು ಮಾತನಾಡುತ್ತಾ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಗೆದ್ದವರು ಹಾಗೂ ಸೋತವರು ಎಲ್ಲರೂ ನಮ್ಮ ಪಕ್ಷಕ್ಕೆ ನಾಯಕರೇ.
5 ವರ್ಷ ಎಲ್ಲರೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸುವಂತೆ ಕರೆ ನೀಡಿದರು. ಜಿಲ್ಲಾ ಕಾಂಗ್ರೆಸ್ನ ಬ್ಲಾಕ್ ಸಂಯೋಜಕರಾದ ವೈ. ಸುಕುಮಾರ್ರವರು ಮಾತನಾಡುತ್ತಾ ಪ್ರತೀ ಬೂತ್ ಮಟ್ಟದಲ್ಲಿ 25 ಕಾರ್ಯಕರ್ತರ ಸಮಿತಿಯನ್ನು ರಚಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಹಾಗೂ ಯಾವಾಗಲೂ ಜನರ ಸಂಪರ್ಕದಲ್ಲಿರುವಂತೆ ತಿಳಿಸಿದರು.
ಬ್ಲಾಕ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕೆರೆಯವರು ಅಧ್ಯಕ್ಷತೆಯನ್ನು ವಹಿಸಿ, ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಜ್ಜಾಗುವಂತೆ ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಪಂಚಾಯತ್ ಸದಸ್ಯರೂ ಆದ ಪ್ರಖ್ಯಾತ್ ಶೆಟ್ಟಿ, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ಕಾರ್ಯದರ್ಶಿ ಯತೀಶ್ ಕರ್ಕೇರಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ. ನರಸಿಂಹ ಮೂರ್ತಿ, ಬಿ. ಕುಶಲ್ ಶೆಟ್ಟಿ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷರಾದ ಎಲ್ಲೂರು ಶಶಿಧರ ಶೆಟ್ಟಿ, ಎನ್.ಎಸ್.ಯು.ಐ. ಜಿಲ್ಲಾ ಅಧ್ಯಕ್ಷ ಸೌರಭ್ ಬಲ್ಲಾಳ್, ಮಾಜಿ ಬ್ಲಾಕ್ ಅಧ್ಯಕ್ಷರಾದ ಮಹಾಬಲ ಕುಂದರ್, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಎಸ್.ಟಿ. ಘಟಕದ ಅಧ್ಯಕ್ಷರಾದ ಅನಂತ ನಾಯ್ಕ್, ನಗರಸಭಾ ಮಾಜಿ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವೀಕ್ಷಕರುಗಳಾದ ಸುಖೇಶ್ ಕುಂದರ್, ಮಾಧವ ಬನ್ನಂಜೆ, ಆಕಾಶ್, ಲಕ್ಷಣ ಪೂಜಾರಿ ಪೆರಂಪಳ್ಳಿ ಹಾಗೂ ಸೋಶಿಯಲ್ ಮೀಡಿಯಾದ ಹಮದ್ ಮೊದಲಾದವರು ಉಪಸ್ಥಿತರಿದ್ದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.