ಅಂಕೋಲ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ, ಪತ್ನಿ ದುರ್ಮರಣ, ಸಚಿವ ಸಹಿತ ನಾಲ್ವರ ಗಂಭೀರ
ಅಂಕೋಲ: ಕೇಂದ್ರ ಸಚಿವ ಶ್ರೀಪಾದ ನಾಯಕ್ ಕಾರು ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಸಚಿವರ ಪತ್ನಿ ದುರ್ಮರಣಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಅಂಕೋಲ ತಾಲೂಕು ಹೊಸಕಂಬಿಯಲ್ಲಿ ನಡೆದ ಅಪಘಾತದಲ್ಲಿ ಸಚಿವರ ಕಾರು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಸಚಿವರ ಪತ್ನಿ ವಿಜಯಾ ಶ್ರೀಪಾದ್ ನಾಯಕ್ ಸಾವಿಗೀಡಾಗಿದ್ದಾರೆ.
ಕೇಂದ್ರ ಆಯುಶ್ ಸಚಿವರಾದ ಶ್ರೀಪಾದ್ ನಾಯಕ್ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಈ ಅಪಘಾತ ನಡೆದಿದೆ.
ಅಂಕೋಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.