ಜ.12: ಉಡುಪಿಯಲ್ಲಿ ಜಿಲ್ಲಾ ಮಟ್ಟದ ಜನ ಸೇವಕ ಸಮಾವೇಶ

ಉಡುಪಿ: ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಜನ ಸೇವಕ ಸಮಾವೇಶ ಜನವರಿ 12 ಮಂಗಳವಾರ ಬೆಳಿಗ್ಗೆ 10.30ಕ್ಕೆ ಉಡುಪಿಯ ಪುತ್ತೂರು-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜಿಲ್ಲಾ ಜನ ಸೇವಕ ಸಮಾವೇಶವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. 

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಗೆ ಜನಸೇವಕ ಸಮಾವೇಶ ಅಭಿನಂದನೆ ಸಲ್ಲಿಸಲಿದೆ. ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜನಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಮತ್ತು ಸಂಸದ ಈರಣ್ಣ ಕಡಾಡಿ ಸಹಿತ ಜಿಲ್ಲೆಯ ಸಂಸದರು, ಸಚಿವರು, ಶಾಸಕರು ಮತ್ತು ಪಕ್ಷದ ಮುಖಂಡರ ಸಮಾಗಮದೊಂದಿಗೆ ಜನ ಸೇವಕ ಸಮಾವೇಶ ಸಂಪನ್ನಗೊಳ್ಳಲಿದೆ.

ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಿಗಮ-ಮಂಡಳಿ ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರು ಹಾಗೂ ನೂತನ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಈ ಜನ ಸೇವಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!