ಶಿರ್ವಾ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ಶಿರ್ವಾ: ವಿಷ ಪದಾರ್ಥ ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶಿರ್ವಾದಲ್ಲಿ ನಡೆದಿದೆ. ಯಶೋಧಾ (52) ಮೃತಪಟ್ಟ ಮಹಿಳೆ, ಇವರು ಬಾಲ್ಯದಿಂದಲೇ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ಚಿಕಿತ್ಸೆ ನೀಡಿದ ಬಳಿಕ ಸ್ವಲ್ಪ ಗುಣಮುಖರಾಗಿದ್ದರೂ ಸಂಪೂರ್ಣ ಗುಣಮುಖರಾಗಿರಲಿಲ್ಲ.
ಈ ನಡುವೆ ನಿನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಈ ವೇಳೆ ಯಶೋಧಾ ಅವರನ್ನು ಕೂಡಲೇ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯಾಧಿಕಾರಿಯವರು ಯಶೋಧ ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.