ಗೋ ನಿಷೇಧ ಕಾಯ್ದೆ ಸುಗ್ರೀವಾಜ್ಞೆ: ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತಂತೆ ಪಿಳ್ಳಣ್ಣ ಗಾರ್ಡನ್ ನಿವಾಸಿ ಮಹಮದ್ಆರಿಫ್ ಜಮೀಲ್ ಎಂಬುವವರು ದಾಖಲು ಮಾಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗುದಂ ಅವರ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಮಹಮದ್ ಆರಿಫ್ ಜಮೀಲ್ ಅವರು, ಸರ್ಕಾರದ ಈ ಸುಗ್ರೀವಾಜ್ಞೆಯು ಭಾರತದ ಸಂವಿಧಾನದ 21 ನೇ ಪರಿಚ್ಚೇದದ ಅಡಿಯಲ್ಲಿ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ವ್ಯಾಪಾರ ಅಥವಾ ವ್ಯವಹಾರವನ್ನು ನಡೆಸುವ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.
ದೇಶದಲ್ಲಿ ಪ್ರಾಣಿಗಳನ್ನು ವಧಿಸುವುದನ್ನು ನಿಷೇಧಿಸುವುದರಿಂದ ಮಾಂಸ ಮಾರಾಟಗಾರರ ಉದ್ಯೋಗ ಮತ್ತು ಅವರ ವ್ಯಾಪಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನಾಗರಿಕರು ತಮ್ಮ ಆಯ್ಕೆಯ ಆಹಾರವನ್ನು ಹೊಂದಲು ವಂಚಿತರಾಗಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.