ಸ್ನಾತಕೋತ್ತರ ತರಗತಿ, ಉಪನ್ಯಾಸಕರನ್ನು ನಿಯೋಜಿಸುವಂತೆ ಯುವ ಸೇನೆ ಮನವಿ
ಕಾಪು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜ ಕಾರ್ಯ(ಎಂಎಸ್ಡಬ್ಲ್ಯು) ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆರಂಭಿಸುವಂತೆ ಹಾಗೂ ಉಪನ್ಯಾಸಕರನ್ನು ನಿಯೋಜಿಸುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ.
ಈಗಾಗಲೇ ಕಾಲೇಜಿನಲ್ಲಿ ತರಗತಿ ಆರಂಭಿಸಲು ವಿದ್ಯಾರ್ಥಿಗಳಿಂದ ಶುಲ್ಕವನ್ನು ಪಡೆಯಲಾಗಿದ್ದು, ಅತ್ತ ತರಗತಿಯನ್ನು ಆರಂಭಿಸದೆ ಇತ್ತ ಆನ್ ಲೈನ್ ಮೂಲಕ ಬೋಧಿಸದೆ ಇರುವುದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಕಲಿಕೆಯಿಂದ ವಂಚಿತರಾಗುವಂತಾಗಿದೆ, ಈ ನಿಟ್ಟಿನಲ್ಲಿ ಅಂಬೇಡ್ಕರ್ ಯುವ ಸೇನೆಯ ಕಾಪು ತಾಲೂಕು ಶಾಖೆಯ ವಿದ್ಯಾರ್ಥಿ ನಾಯಕಿ ಸುಶ್ಮಿತಾ ಇವರು ಕಾಲೇಜು ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಮನವಿಯನ್ನು ಸಲ್ಲಿಸಿದರು.