ಜಿಲ್ಲೆಯಲ್ಲಿ 977 ಕೋವಿಡ್ ಪಾಸಿಟಿವ್, ಉಡುಪಿಯ ಐವರು, ಕಾರ್ಕಳದ ಓರ್ವರ ಮೃತ್ಯು

ಉಡುಪಿ, ಮೇ.7(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಸಂಖ್ಯೆ ‌ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 977 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸೋಂಕಿತರು ಮೃತಪಟ್ಡಿದ್ದಾರೆ.

ಇಂದು ಜಿಲ್ಲೆಯಲ್ಲಿ ಪತ್ತೆಯಾದ ಕೊರೋನಾ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿಯಲ್ಲಿ 383, ಕುಂದಾಪುರ 280 , ಕಾರ್ಕಳ 310 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5249 ಕ್ಕೆ ಏರಿಕೆ ಯಾಗಿದೆ.ಇಂದು ಜಿಲ್ಲೆಯಲ್ಲಿ ಉಡುಪಿಯ 64 ವರ್ಷದ, 87 ವರ್ಷದ, 60 ವರ್ಷದ ಮೂವರು ಮಹಿಳೆಯರು, 58 ವರ್ಷದ, 85 ವರ್ಷದ ಇಬ್ಬರು ಪುರುಷರು ಹಾಗೂ ಕಾರ್ಕಳದ 81 ವರ್ಷದ ಓರ್ವ ಪುರುಷ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೇ.6 ರಂದು 783 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

 ಮೇ. 6 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,23,143 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 37,869 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈವರೆಗೆ ಜಿಲ್ಲೆಯಲ್ಲಿ 32,402 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ218 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ

ಇಂದು ಜಿಲ್ಲೆಯಲ್ಲಿ 783 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 32,400  ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ಇಂದು ಜಿಲ್ಲೆಯಲ್ಲಿ 6 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ವರೆಗೆ 217 ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.ಇನ್ನು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 37,867 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ದ.ಕ. ಜಿಲ್ಲೆಯಲ್ಲಿ 1633 ಮಂದಿಯಲ್ಲಿ ಸೋಂಕು ಪತ್ತೆ, 7 ಮಂದಿ ಮತ್ತೆ ಸೋಂಕಿಗೆ ಬಲಿಯಾಗಿದ್ದು. ಒಟ್ಟು ಕೋವಿಡ್ ಸಾವಿನ ಸಂಖ್ಯೆ 778ಕ್ಕೆ ಏರಿಕೆ.

ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 48,781 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 592 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 48,781 ಹೊಸ ಸೋಂಕು ಪ್ರಕರಣಗಳು  ವರದಿಯಾಗಿದ್ದು, ಆ ಮೂಲಕ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 18,38,885ಕ್ಕೆ ಏರಿಕೆಯಾಗಿದೆ. 

ಅಂತೆಯೇ ರಾಜ್ಯದಲ್ಲಿ ಇಂದು ದಾಖಲೆಯ 592 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ರಾಜ್ಯದಲ್ಲಿ 17,804 ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 28, 623 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ  ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 12,84,420ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 53,6,641ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!