ಉಡುಪಿ: ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಪ್ರಥಮ ವಾರ್ಷಿಕೋತ್ಸವ

ಉಡುಪಿ: ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ ನ ಪ್ರಥಮ ವರ್ಷದ ವಾರ್ಷಿಕೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉಡುಪಿಯ ಮಿತ್ರ ಆಸ್ಪತ್ರೆ ಬಳಿಯ ವಾದಿರಾಜ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಗಿತ್ತು. ಈ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಬೇಕಾದ ಸಾಮಾಗ್ರಿಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸಿದ ಒಂದು ಉತ್ತಮ ಸಂಸ್ಥೆಯಾಗಿದೆ. ಈ ಸಂಸ್ಥೆ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವುದರ ಜೊತೆಗೆ ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಇವರ ಸೇವೆ ಇನ್ನಷ್ಟು ಉಡುಪಿಯ ಜನತೆಗೆ ಅನುಕೂಲವಾಗುವಂತಾಗಲಿ. ಇನ್ನೂ ಹೆಚ್ಚು ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಇಡೀ ರಾಜ್ಯದಲ್ಲೇ ಹೆಸರುಗಳಿಸುವಂತಾಗಲಿ ಎಂದು ಗಿರಿಜಾ  ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್ ಸಂಸ್ಥೆಗೆ ಶುಭ ಹಾರೈಸಿದರು.

ಸಂಸ್ಥೆಯ ಪಾಲುದಾರ ರವೀಂದ್ರ ಶೆಟ್ಟಿ ಅವರು ಮಾತನಾಡಿ, ಈ ಉಚಿತ ಆರೋಗ್ಯ ತಪಾಸಣಾ ಶಿಬಿರವು ತಮ್ಮ ಎರಡೂ ಶಾಖೆಗಳಲ್ಲಿ ಪ್ರತೀ ಬಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆಯಲಿದ್ದು, ಸಾರ್ವಜನಿಕರು ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದು ಕೊಳ್ಳುವಂತೆ ಸಲಹೆ ನೀಡಿದರು.  ಕಾರ್ಯಕ್ರಮದಲ್ಲಿ ಲೀಲಾ ಅವರಿಗೆ ವೀಲ್ ಚೇರ್‌ನ್ನು ವಿತರಿಸಲಾಯಿತು.

ಇದೇ ವೇಳೆ ಖ್ಯಾತ ಚಿತ್ರಕಾರರಾದ ರಮೇಶ್ ಕಿದಿಯೂರು ಅವರು ಚಿತ್ರಿಸಿದ ಅತಿಥಿಗಳ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ಅತಿಥಿಗಳಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಅಧ್ಯಕ್ಷ  ಜಯ ಸಿ ಕೋಟ್ಯಾನ್, ಸಂಸ್ಥೆಯ ಪಾಲುದಾರರಾದ ಹರೀಶ್ ಕುಮಾರ್, ಭಾಸ್ಕರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!