ರೆಡ್ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ
ಉಡುಪಿ, ಜ.13: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ
ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವು ಶನಿವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲ್ನಲ್ಲಿ ನಡೆಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಪ್ರಥಮ ಚಿಕಿತ್ಸೆಯನ್ನು ಪಡೆದು ಯಾವ ರೀತಿ ಜನರನ್ನು ರಕ್ಷಣೆ ಮಾಡಬಹುದು ಎಂಬ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ. ಜಯರಾಮ್ ಆಚಾರ್ಯ ಸಾಲಿಗ್ರಾಮ, ಇವರು ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಚಟುವಟಿಕೆ ಮತ್ತು ಪ್ರಥಮ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನಿರ್ದೇಶಕ ಡಾ. ರಾಮಚಂದ್ರ ಕಾಮತ್, ಅಪಘಾತಕ್ಕೊಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡಿ, ಯಾವ ರೀತಿ ಜೀವ ರಕ್ಷಣೆ ಮಾಡಬಹುದು ಎಂಬ ಬಗ್ಗೆ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಟೆಲ್ನ ಪ್ರವೀಣ್ ಕುಮಾರ್ ಶರ್ಮಾ ವಹಿಸಿದ್ದರು.
ಡಿಡಿಆರ್ಸಿ ನೋಡಲ್ ಅಧಿಕಾರಿ ಅನುಷಾ ಆಚಾರ್ಯ ಹಾಗೂ ಸುನೀತಾ ಉಪಸ್ಥಿತರಿದ್ದರು. ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು. ಕಂಟ್ರಿ ಇನ್ ಹೋಟೆಲ್ನ 50 ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ತರಬೇತಿಯನ್ನು ನೀಡಲಾಯಿತು.