ಮಹಿಳಾ ಪೊಲೀಸ್ ಪೇದೆ ಮೇಲೆ ಸಹೋದ್ಯೋಗಿ ಪೊಲೀಸನಿಂದಲೇ ಅತ್ಯಾಚಾರ!
ಗೊಂಡಾ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಮೇಲೆ ಸಹೋದ್ಯೋಗಿ ಕಾನ್ಸ್ಟೆಬಲ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವುದಾಗಿ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಈ ಸಂಬಂಧ ಮಂಗಳವಾರ ರಾತ್ರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾನ್ಸ್ಟೆಬಲ್ ಒಬ್ಬರು ತನ್ನ ಕೋಣೆಯನ್ನು ತೋರಿಸುವ ನೆಪದಲ್ಲಿ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಹಿಳಾ ಪೊಲೀಸ್ ಪೇದೆ ಆರೋಪಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ಅವರು ತಿಳಿಸಿದ್ದಾರೆ.
ತನ್ನ ಕೃತ್ಯದ ಬಗ್ಗೆ ಬಾಯಿ ಬಿಟ್ಟರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಾನ್ಸ್ಟೆಬಲ್ ಬೆದರಿಕೆ ಹಾಕಿರುವುದಾಗಿ ಮಹಿಳೆ ಆರೋಪಿಸಿದ್ದಾಳೆ.
ಮಹಿಳಾ ಪೊಲೀಸ್ ಪೇದೆಯ ದೂರಿನ ಆಧಾರದ ಮೇಲೆ ಕಾನ್ಸ್ಟೆಬಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಹಿಳಾ ಕಾನ್ಸ್ಟೆಬಲ್ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪಾಂಡೆ ಹೇಳಿದ್ದಾರೆ