ಜ.17ರಂದು ಯುವವಾಹಿನಿ ವತಿಯಿಂದ ಜೀವನ ಶೈಲಿ ಮತ್ತು ಒತ್ತಡ ನಿರ್ವಹಣೆ ಕಾರ್ಯಾಗಾರ
ಉಡುಪಿ: ಯುವ ವಾಹಿನಿ ಉಡುಪಿ ಘಟಕ ಇದರ ವತಿಯಿಂದ, ಜೀವನ ಶೈಲಿ ಮತ್ತು ಒತ್ತಡ ನಿರ್ವಹಣೆ ಕುರಿತ ಮಾಹಿತಿ ಕಾರ್ಯಕ್ರಮ ಉದ್ಯಾವರದ ಬಲಾಯಿಪಾದೆ ಕಟಪಾಡಿ ಗರೋಡಿ ಮನೆ ನಾಗಪ್ಪ ಪೂಜಾರಿ ವೇದಿಕೆಯಲ್ಲಿ ಜ. 17 ರಂದು ನಡೆಯಲಿದೆ.
ಈ ಕಾರ್ಯ ಕ್ರಮವನ್ನು ಯುವ ವಾಹಿನಿ ಕೇಂದ್ರ ಸಮಿತಿಯ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಅಶೋಕ್ ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಯುವ ವಾಹಿನಿ ಉಡುಪಿ ಘಟಕದ ಅಧ್ಯಕ್ಷ ಜಗದೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಉಡುಪಿ ಡಾ.ಎ.ವಿ.ಬಾಳಿಗ ಆಸ್ಪತ್ರೆಯ ಮನಶಾಸ್ತ್ರಜ್ಞರಾದ ಡಾ.ವಿರೂಪಾಕ್ಷ ದೇವರ ಮನೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಯುವ ವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್, ಸಂಘಟನಾ ಕಾರ್ಯದರ್ಶಿ ರಿತೇಶ್ ಕೋಟ್ಯಾನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು , ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಯುವವಾಹಿನಿ ಘಟಕ ತಿಳಿಸಿದೆ.