ಟಿಪ್ಪರ್ ಹಾಗೂ ಟಿಟಿ ನಡುವೆ ಭೀಕರ ಅಪಘಾತ 12 ಮಂದಿ ಮೃತ್ಯು

ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 12 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ವೇಳೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿದೆ ಪರಿಣಾಮ 10 ಮಹಿಳೆಯರು ಸೇರಿ ಒಟ್ಟು 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದಾಗಿ ಟೆಂಪೋ ಟ್ರಾವೆಲರ್‌ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. 

ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.ಅಪಘಾತದ ಭೀಕರತೆಗೆ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಾಯಗೊಂಡ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ,

ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮೃತದೇಹಗಳು ಇನ್ನು ವಾಹನದಲ್ಲಿ ಸಿಲುಕಿಕೊಂಡಿವೆ. ತೀವ್ರವಾಗಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ದಾವಣಗೆರೆಯವರು ಎಂದು ತಿಳಿದು ಬಂದಿದೆ.

ಕ್ರೇನ್ ಸಹಾಯದಿಂದ ಮಗುಚಿದ ವಾಹನವನ್ನು ಎತ್ತಿಡಲಾಗಿದೆ. ಒಳಗೆ ಸಿಲುಕಿರುವ ಮೃತದೇಹ ಪೊಲೀಸರು ಹೊರಕ್ಕೆ ತೆಗೆಯುವ ಪ್ರಕ್ರಿಯೆ ನೆಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!