ಶಂಕರನಾರಾಯಣ: ಹಾವು ಕಚ್ಚಿ ವ್ಯಕ್ತಿಯೋರ್ವನ ಸಾವು
ಶಂಕರನಾರಾಯಣ: ಹಾವು ಕಚ್ಚಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರದ ಹೆಂಗವಳ್ಳಿಯಲ್ಲಿ ನಡೆದಿದೆ.
ಮಹಮ್ಮದ್ ಆಲಮ್ ಹಾವು ಕಚ್ಚಿ ಮೃತಪಟ್ಟವರು. ನಿನ್ನೆ ಹೆಂಗವಳ್ಳಿಯ ನಿವಾಸಿಯೊಬ್ಬರ ಮನೆ ಸಮೀಪ ಹಾವು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿ ಅವರು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು, ಹಾಲಾಡಿಯ ಶ್ರೀದುರ್ಗಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಮ್‌ಸಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ, ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.