ಶಿರ್ವ: ಜನಾ ಸೇವಾ ಕೇಂದ್ರ ಉದ್ಘಾಟನೆ
ಶಿರ್ವ: ಜನಾ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಬಂಟಕಲ್ಲುವಿನ ಮೈತ್ರಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬಂಟಕಲ್ ವಾರ್ಡಿನ ಎಲ್ಲಾ ಜನರ ಸಮಸ್ಯೆಗೆ ಸ್ಪಂದನೆ ಹಾಗೂ ಸರಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಲು ಈ ಜನ ಸೇವಾ ಕೇಂದ್ರ ಜಾತಿ-ಮತಭೇದವಿಲ್ಲದೆ ಎಲ್ಲರೊಂದಿಗೆ ಒಗ್ಗೂಡಿಕೊಂಡು ಹೋಗುವಲ್ಲಿ ಪ್ರಮುಖ ಪ್ರಾತ್ರ ವಹಿಸುತ್ತೆ ಎಂದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಭಾ.ಜ.ಪ. ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಶಿರ್ವಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ, ಪಕ್ಷದ ಪ್ರಮುಖರಾದ ಪ್ರವೀಣ್ ಕುಮಾರ್, ಸಂದೀಪ್ ಬಂಗೇರ ( ಕೀರ್ತಿ), ಪ್ರೀತಿಲತಾ ಆಚಾರ್ಯ, ರವೀಂದ್ರ ಪಾಟ್ಕರ್ ಮೊದಲಾದವರು ಉಪಸ್ಥಿತರಿದ್ದರು.