ಉಡುಪಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ – ಆತ್ಮಹತ್ಯೆ ಶಂಕೆ
ಉಡುಪಿ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಉಡುಪಿಯ 76 ಬಡಗುಬೆಟ್ಟಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (52 ) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಬಡಗುಬೆಟ್ಟಿನ ಪರಿಸರದಲ್ಲಿರುವ ಹಳೆ ಮನೆಯೊಂದರ ಜಂತಿಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ವ್ಯಕ್ತಿಯು ನಾಲ್ಕು ದಿನಗಳ ಹಿಂದೆ ಮೃತಪಟ್ಟಿರ ಬಹುದು ಎಂದು ಹೇಳಲಾಗುತ್ತಿದೆ.
ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.