ಪಾಕ್ ಪರ ಘೋಷಣೆ ಕೂಗಿದ ನೈಜ ಆರೋಪಿಗಳನ್ನು ಬಂಧಿಸುವಂತೆ ಎಸ್‌ಡಿಪಿಐ ಪ್ರತಿಭಟನೆ
ಮಂಗಳೂರು: ಉಜಿರೆಯಲ್ಲಿ ಮತ ಎಣಿಕೆ ಸಂದರ್ಭ ಪಾಕ್ ಪರ ಘೋಷಣೆ ಕೇಳಿಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಎಸ್‌ಡಿಪಿಐನಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಯಿತು.
ಅಮಾಯಕ ಯುವಕರನ್ನು ಬಿಡುಗಡೆ ಮಾಡಬೇಕು, ನೈಜ ಆರೋಪಿಗಳಾದ ಬಿಜೆಪಿ – ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಬೇಕು ಹಾಗೂ ಕರ್ತವ್ಯ ಲೋಪ ಎಸಗಿದ ಬೆಳ್ತಂಗಡಿ ಪೊಲೀಸ್ ಸಬ್‌ಇನ್ ಸ್ಪೆಕ್ಟರ್ ನಂದಕುಮಾರ್ ಅವರನ್ನು ಅಮಾನತು ಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ನಗರದ ಟೌನ್‌ಹಾಲ್‌ನಿಂದ ವೆನ್ಲಾಕ್ ಆಸ್ಪತ್ರೆವರೆಗೆ ಕಾರ್ಯಕರ್ತರು ಜಮಾಯಿಸಿದ್ದು, ಎಸ್ಪಿ ಕಚೇರಿಗೆ ತೆರಳಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ತಡೆದು ಮುಂದೆ ಹೋಗದಂತೆ ಬ್ಯಾರಿಕೇಡ್‌ಗಳನ್ನು ಅಡ್ಡಲಾಗಿ ಅಳವಡಿಸಿ ಪೊಲೀಸರು ನಿಯಂತ್ರಿಸಿದ್ದಾರೆ.