ಕರಂಬಳ್ಳಿ ವೆಂಕಟರಮಣ ದೇವಸ್ಥಾನ: ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

ಉಡುಪಿ: ಉಡುಪಿಯ ಅತ್ಯಂತ ಪ್ರಾಚೀನ ದೇವಾಲಯಗಳಲ್ಲಿ ಒಂದಾಗಿರುವ ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸೋಮವಾರ ವಿಜೃಂಭಣೆಯಿಂದ ಸಂಪನ್ನಗೊಂಡಿತು.

90 ಲಕ್ಷ ವೆಚ್ಚದಲ್ಲಿ ಪರಿವಾರ ದೇವರಾದ ಗಣಪತಿ‌, ಉಮಾಮಹೇಶ್ವರ, ಆಂಜನೇಯ ಗುಡಿ, ಪರಿವಾರ ದೈವಗಳಾದ ರಕ್ತೇಶ್ವರಿ, ನಂದಿಗೋಣ, ಬೊಬ್ಬರ್ಯ, ಪಂಜುರ್ಲಿ, ಬೈಕಾಡ್ತಿ ಗುಡಿಗಳನ್ನು ನಿರ್ಮಾಣ ಮಾಡಲಾಗಿತ್ತು. 

ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.‌ ಸಂಜೆ ದೇವಸ್ಥಾನಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ಭೇಟಿ ನೀಡಲಿದ್ದಾರೆ. ರಾತ್ರಿ 9ರಿಂದ ಹನುಮಗಿರಿ ಮೇಳದ ಕಲಾವಿದರಿಂದ ತೆಂಕುತಿಟ್ಟು ಯಕ್ಷಗಾನ ಪ್ರಸಂಗ ‘ಶ್ರೀನಿವಾಸ ಕಲ್ಯಾಣ-ಮಾಯಾ ಮಾರುತೇಯ’ ನಡೆಯಲಿದೆ ಎಂದಿ ಅವರು ಹೇಳಿದರು.

ಸಂಜೆ ನಡೆಯುವ ಧರ್ಮಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!