ದಟ್ಟ ಮಂಜು – ಭೀಕರ ರಸ್ತೆ ಅಪಘಾತ: 13 ಮಂದಿ ದಾರುಣವಾಗಿ ಮೃತ

ಕೋಲ್ಕತ್ತಾ: ದಟ್ಟ ಮಂಜಿನಿಂದ ರಸ್ತೆ ಕಾಣದೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಪುರಿ ನಗರದಲ್ಲಿ  ನಡೆದಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಾಹನದಲ್ಲಿದ್ದವರ ಬಗ್ಗೆ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

ತಕ್ಷಣ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ತಂಡ ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು  ಕ್ರೇನ್ ಮೂಲಕ ರಕ್ಷಣಾ ಕಾರ್ಯದಲ್ಲಿ ನಡೆಸಲಾಗಿದೆ. ದಟ್ಟ ಮಂಜು ಕವಿದ ಪರಿಣಾಮ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿರಬಹುದು ಎಂದು ಸರ್ಕಲ್ ಇನ್ಸ್ ಪೆಕ್ಟರ್ ಶಂಕೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!