ಬೈಂದೂರು: ಗಾಂಜಾ ಸೇವನೆ ಮೂವರು ಪೊಲೀಸರು ವಶಕ್ಕೆ
ಬೈಂದೂರು: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಗಾಂಜಾ ಸೇವನೆ ಪ್ರಕರಣಗಳು ನಡೆದಿದೆ. ಜ. 13 ರಂದು ಈ ಎರಡೂ ಪ್ರಕರಣಗಳು ನಡೆದಿದ್ದು, ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಂದು ಪ್ರಕರಣದಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರು ಯುವಕರನ್ನು ಪೊಲೀಸರು ಶಿರೂರು ಗ್ರಾಮದ ರೈಲ್ವೆ ಸಂಕದಗುಂಡಿ ಸೇತುವೆ ಬಳಿ ವಶಕ್ಕೆ ಪಡೆದಿದ್ದಾರೆ. ಪೊಲೀಸರು ರೌಂಡ್ಸ್ನಲ್ಲಿದ್ದ ವೇಳೆ, ಇಬ್ಬರು ಯುವಕರು ಗಾಂಜಾ ಸೇವಿಸಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಇಬ್ಬರು ಯುವಕರು ಅಮಲಿನಲ್ಲಿರುವುದು ಕಂಡು ಬಂದಿದೆ. ಈ ಸಂಬಂಧ ಅಬ್ದುಲ್ ಸವೂದ್ (28), ಮಹ್ಮದ್ ನಝೀರ್ (29) ಎಂಬ ಇಬ್ಬರನ್ನು ವಶಕ್ಕೆ ಪಡೆದ ಪಲೀಸರು ವೈದ್ಯಕೀಯ ಪರೀಕ್ಷೆ ನಡೆಸಿದದ್ದು, ಇಬ್ಬರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಇನ್ನು ಮತ್ತೊಂದು ಪ್ರಕರಣದಲ್ಲಿ, ಶಿರೂರು ಗ್ರಾಮದ ಕರಿಕಟ್ಟೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವನೆ ಮಾಡುತ್ತಿರುವುದಾಗಿ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅಲ್ಲಿ ಒರ್ವ ಯುವಕ ಅಮಲಿನಲ್ಲಿರುವುದು ಕಂಡು ಬಂದಿದೆ. ಈ ವೇಳೆ ಬುಡ್ಡು ಶಕೀಬ್ (26) ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಯುವಕ ಗಾಂಜಾ ಸೇವಿಸಿರುವುದು ದೃಢ ಪಟ್ಟಿದೆ. ಇದೀಗ ಎರಡೂ ಪ್ರಕಣಕ್ಕೆ ಸಂಬಂಧಿಸಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.