ಕುಂದಾಪುರ; ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಕುಂದಾಪುರ(ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಅಸೋಡು ಗ್ರಾಮದಲ್ಲಿ ನಡೆದಿದೆ. ಪಾರ್ವತಿ(55) ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಇವರು ತಮ್ಮ ಸಹೋದರನೊಂದಿದೆ ಮನೆಯಲ್ಲಿ ವಾಸವಾಗಿದ್ದರು. ಇವರ ಸಹೋದರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆಂದು ಹೋಗಿದ್ದು ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ ಅಕ್ಕ ಪಾರ್ವತಿ ಮನೆಯಲ್ಲಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಈ ವೇಳೆ ಪಾರ್ವತಿ ಅವರನ್ನು ಹುಡುಕಾಡಿದಾಗ ಮನೆಯ ಹೊರಗಡೆ ಇರುವ ಬಾವಿಯಲ್ಲಿ ದಂಡಿಗೆಗೆ ಸೀರೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಮೃತರು ಮೂರು ವರ್ಷದಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಪಾರ್ವತಿ ಅವರು ಮಾನಸಿಕ ಖಾಯಿಲೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.