ಡಾ.ಬಿ.ಎಂ.ಹೆಗ್ಡೆಯವರಿಗೆ ಪದ್ಮವಿಭೂಷಣ ಗರಿ
ನವದೆಹಲಿ: 2021ನೇ ಸಾಲಿನ ಪದ್ಮ ವಿಭೂಷಣದ ಗರಿ ಕರ್ನಾಟಕದ ಡಾ.ಬಿ.ಎಂ.ಹೆಗ್ಡೆ (ಡಾ.ಬೆಳ್ಳೆ ಮೋನಪ್ಪ ಹೆಗ್ಡೆ) ಯವರಿಗೆ ಸಂದಿದೆ
ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಸೋಮವಾರ ಪ್ರಕಟಗೊಂಡಿದೆ. ಡಾ.ಬಿ.ಎಂ.ಹೆಗ್ಡೆ ಸೇರಿದಂತೆ ಏಳು ಜನರಿಗೆ ಪದ್ಮವಿಭೂಷಣ ಪ್ರಶಸ್ತಿ ಸಂದಿದೆ.
ಪದ್ಮವಿಭೂಷಣ ಪ್ರಶಸ್ತಿ
ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ, ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕದ ಡಾ.ಬಿ.ಎಂ.ಹೆಗ್ಡೆ, ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ (ಮರಣೋತ್ತರ) ,ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ನರಿಂದರ್ ಸಿಂಗ್ ಕಪಾನಿ (ಮರಣೋತ್ತರ),–ಅಮೆರಿಕ ಆಧ್ಯಾತ್ಮ– ಮೌಲಾನಾ ವಹೀದುದ್ದೀನ್ ಖಾನ್–ದೆಹಲಿ ಪುರಾತತ್ವ ಶಾಸ್ತ್ರ–ಬಿ.ಬಿ.ಲಾಲ್–ದೆಹಲಿ ಕಲೆ–ಸುದರ್ಶನ್ ಸಾಹೋ–ಒಡಿಶಾ