ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಟ್ರಾನ್ಸ್ ಫಾರ್ಮರ್‌ಗೆ ಡಿಕ್ಕಿ

ಕಾಸರಗೋಡು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟ್ರಾನ್ಸ್ ಫಾರ್ಮರ್‌ಗೆ ಡಿಕ್ಕಿ ಹೊಡೆದ ಘಟನೆ ಕಾಸರಗೋಡು ನೆಲ್ಲಿಕುಂಜೆ ಬಂದರಿನಲ್ಲಿ ಜ.25 ರ ರಾತ್ರಿ ನಡೆದಿದೆ.

ಬಂದರಿನಿಂದ ನೆಲ್ಲಿಕುಂಜೆ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ಫಾರ್ಮರ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಟ್ರಾನ್ಸ್ ಫಾರ್ಮರ್ ಸಮೀಪದ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

ಅದೃಷ್ಟವಶಾತ್ ಕಾರಲ್ಲಿದ್ದ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ವಿದ್ಯತ್ ಕಂಬಗಳು ಮುರಿದು ಬಿದ್ದ ಕಾರಣ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ

Leave a Reply

Your email address will not be published. Required fields are marked *

error: Content is protected !!