ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರ: ಪೊಲೀಸರಿಂದ 22 ಎಫ್ಐಆರ್
ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 22 ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ 100 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ನ ಹೆಚ್ಚುವರಿ ಪಿಆರ್ ಒ ಅನಿಲ್ ಮಿತ್ತಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 22 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ 100 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.