ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್!

ಬೆಂಗಳೂರು: ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ವಾರದ ರಜೆ ಕಡ್ಡಾಯ ಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ವಾರದ ರಜೆ ಕಡ್ಡಾಯ ಗೊಳಿಸುವಂತೆ  ಡಿಜಿ ಐಜಿಪಿ ಪ್ರವೀಣ್ ಸೂದ್ ಸುತ್ತೊಲೆಯೊಂದನ್ನು ಹೊರಡಿಸಿದ್ದಾರೆ. ಈ ಮೂಲಕ ಇನ್ನು ಮುಂದೆ ಪೊಲೀಸರಿಗೆ ವಾರದಲ್ಲಿ ಒಂದು ದಿನ ವಾರದ ರಜೆ ಕಡ್ಡಾಯ ಗೊಳಿಸಲಾಗುತ್ತದೆ. 

ಪೊಲೀಸರಿಗೆ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ರಜೆ ನೀಡುವಂತೆ ಈ ಹಿಂದೆಯೇ ಆದೇಶ ನೀಡಲಾಗಿತ್ತು. ಆದರೆ ಠಾಣಾಧಿಕಾರಿಗಳು ವಾರದ ರಜೆಯನ್ನು  ನೀಡುತ್ತಿಲ್ಲವೆಂದು ಕೆಲ ಪೊಲೀಸರು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದ  ಹಿನ್ನೆಲೆ ಇದೀಗ ಮತ್ತೋಮ್ಮೆ ವಾರದ ರಜೆ ಕಡ್ಡಾಯ ಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ನಗರ ಪೊಲೀಸ್ ಆಯುಕ್ತರು, ವಲಯ ಐಜಿಪಿ, ಜಿಲ್ಲಾ ಎಸ್ಪಿಗಳಿಗೆ ಸೂಚನೆ ನೀಡಲಾಗಿದ್ದು, ಚುನಾವಣೆ ,ಬಂದೋ ಬಸ್ತ್  ತುರ್ತು ಪರಿಸ್ಥಿತಿ ಹೊರತುಪಡಿಸಿ ಬೇರೆ ಎಲ್ಲಾ ಸಂದರ್ಭದಲ್ಲಿ ವಾರದ ರಜೆ ಕಡ್ಡಾಯವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!