ಸಿಂಘು ಗಡಿ ಉದ್ವಿಗ್ನ: ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ

ನವದೆಹಲಿ: ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಎಂದು ಹೇಳಿಕೊಳ್ಳುವ ಜನರು ಹಾಗೂ ಪ್ರತಿಭಟನಾ ನಿರತ ರೈತರ ಮಧ್ಯೆ ಗಲಾಟೆ ನಡೆದಿದೆ.

ಈ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿರುವ ಘಟನೆಗಳು ವರದಿಯಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಲ್ಲದೆ ಅಶ್ರುವಾಯು ಪ್ರಯೋಗಿಸಿದರು.

ಪೊಲೀಸ್ ಬ್ಯಾರಿಕೇಡ್‌ಗಳನ್ನು ಧ್ವಂಸಗೊಳಿಸಲಾಗಿದೆ. ಸ್ಥಳೀಯರೆಂದು ಹೇಳಿಕೊಳ್ಳುತ್ತಿರುವ ಜನರು ರೈತರ ವಿರುದ್ಧ ಘೋಷಣೆಗಳನ್ನು ಕೂಗಿ, ಸ್ಥಳ ಖಾಲಿ ಮಾಡುವಂತೆ ಪ್ರತಿಭಟಿಸಿದರು. 

Leave a Reply

Your email address will not be published. Required fields are marked *

error: Content is protected !!