ಖಾಸಗಿ ಶಾಲೆಗಳಿಗೆ ಫೀಸ್ ನಿಗದಿ ಮಾಡಿದ ಸರ್ಕಾರ, ಶೇ.70 ರಷ್ಟು ಬೋಧನಾ ಶುಲ್ಕ ಪಡೆಯುವಂತೆ ಆದೇಶ
ಬೆಂಗಳೂರು: ಖಾಸಗಿ ಶಾಲೆಗಳು ಕೋವಿಡ್ ಸಂಕಷ್ಟದ ಕಾಲದಲ್ಲೂ ಪೂರ್ಣ ಪ್ರಮಾಣದ ಶುಲ್ಕ ವಸೂಲಿಗೆ ಕಡಿವಾಣ ಹಾಕಿದ ರಾಜ್ಯ ಸರ್ಕಾರ, 2019-20ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಪಡೆಯಬೇಕು ಎಂದು ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದ ಯಾವುದೇ ಮಾದರಿಯ ಪಠ್ಯಕ್ರಮದ ಖಾಸಗಿ ಶಾಲೆಗಳು 2019ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಮಾತ್ರ ಪಡೆಯಬೇಕು. ಬೋಧನಾ ಶುಲ್ಕ ಹೊರತುಪಡಿಸಿ ಇತರೆ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಟ್ರಸ್ಟ್ ಗೆ ಡೊನೇಷನ್ ಪಡೆಯುವಂತಿಲ್ಲ ಎಂದು ಸೂಚಿಸಿದ್ದಾರೆ.
ಈಗ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಎರಡು ಅಥವಾ ಮೂರು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಬೇಕು. ಈ ಬಗ್ಗೆ ಶಾಲೆ ಹಾಗೂ ಪೋಷಕರಿಂದ ಬರುವ ದೂರುಗಳ ನಿರ್ವಹಣೆಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಿಮಿತಿ ರಚನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
Yes we need 30% off on our college fees