ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ವಿಡಿಯೋ ಭಾರೀ ವೈರಲ್! ತನಿಖೆಗೆ ಆದೇಶ
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಈ ನಡುವೆ ಕರ್ತವ್ಯದ ಸಮಯದಲ್ಲಿ ಬಾರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ನಡೆಸಿದ ವಿಡಿಯೊ ಒಂದು ಸಾಮಾಜಿಕ ಜಾಲ ತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಪೊಲೀಸರ ಬಾರ್ ಪಾರ್ಟಿಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು ಕಮಿಷನರ್ ಶಶಿಕುಮಾರ್ ತನಿಖೆಗೆ ಆದೇಶಿಸಿದ್ದಾರೆ. ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಮಂಗಳೂರು ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಪಾರ್ಟಿ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು, ಇದರೊಂದಿಗೆ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯ ಜೊತೆ ಸೇರಿ ಪೊಲೀಸರು ಮದ್ಯ ಸೇವನೆ ಮಾಡುತ್ತಿದ್ದರು ಎಂಬ ಆರೋಪವೂ ಕೇಳಿ ಬಂದಿದೆ.
ಇದೀಗ ವೈರಲ್ ಆಗಿರುವ ವಿಡಿಯೋದ ಬಗ್ಗೆ ತನಿಖೆ ನಡೆಸಲು ನಗರ ಆಯುಕ್ತರು ಆದೇಶಿಸಿದ್ದು, ಮಂಗಳೂರು ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.