ಗಾಂಧೀಜಿಯನ್ನು ಹತ್ಯೆಗೈದವನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಯಾರನ್ನೂ ಶತ್ರುಗಳೆಂದು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಗಾಂಧೀಜಿಯವರನ್ನು ಹತ್ಯೆಮಾಡಿದ್ದ ಎಂಬುದನ್ನು ನಾವು ಮರೆಯಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಹಾತ್ಮಾಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಮಹಾತ್ಮಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ. ಈ ಮೂಲಕ ಸ್ವಾತಂತ್ರ್ಯಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವವನ್ನು ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು ಹುತಾತ್ಮರು ಅನಾಮಿಕರಾಗಿಯೇ ಉಳಿದಿದ್ದಾರೆ. ಅವರ ನಿಸ್ವಾರ್ಥವಾದ ದೇಶಭಕ್ತಿ ನಮಗೆಲ್ಲರಿಗೂ ಆದರ್ಶವಾಗಬೇಕು ಎಂದರು.

ಗಾಂಧೀಜಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸ್ವಾತಂತ್ರ್ಯಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ತಮ್ಮ ಜೀವನ ಪಯಣ ನಡೆಸಿದ ಗಾಂಧೀಜಿ ಮಹಾನ್ ಸಮಾಜ ಪರಿವರ್ತಕ ಎಂದು ಸಿದ್ದರಾಮಯ್ಯ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!